newsics.com
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೇ, ಶಿವಮೊಗ್ಗ ಸೇರಿದಂತೆ ಇತರೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಸಂಬಂಧ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
ಇಂದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಮತ್ತು ನಾಡಿದ್ದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ನೀಡಿದ್ದರೇ, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಇತರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಿನಾಂಕ 28-07-2025ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
Renukaswamy case ರೇಣುಕಾಸ್ವಾಮಿ ಕೊಲೆ ಪ್ರಕರಣ; ತೀರ್ಪು ಕಾಯ್ದಿರಿಸಿದ ಸುಪ್ರೀಂ