newsics.com
ಆಫೀಸಿನ ಭ್ರಷ್ಟಾಚಾರಕ್ಕೆ ಸಹಕರಿಸಲಾಗದೆ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಸಹಾಯಕ ಎಂಜಿನಿಯರ್ ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂa ಬೊಂಗೈಗಾಂವ್‌ನಲ್ಲಿ ನಡೆದಿದೆ.
30 ವರ್ಷದ ಜ್ಯೋತಿಷಾ ದಾಸ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸೂಸೈಡ್ ನೋಟ್ ಸಿಕ್ಕಿದ್ದು, ನಿರಂತರ ಒತ್ತಡ ಮತ್ತು ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ
ಆತ್ಮಹತ್ಯೆಯಿಂದ ಸಾವನ್ನಪ್ಪಿದ ಎಂಜಿನಿಯರ್ ಜ್ಯೋತಿಷಾ ದಾಸ್, ನಕಲಿ ಬಿಲ್‌ಗಳನ್ನು ತೆರವುಗೊಳಿಸಲು ಸಹೋದ್ಯೋಗಿಗಳ ಒತ್ತಡ ಹೆಚ್ಚಾಗಿದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರು ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ. ಅಪೂರ್ಣ ಕೆಲಸದ ಬಿಲ್‌ಗಳನ್ನು ಅನುಮೋದಿಸುವಂತೆ ಒತ್ತಾಯಿಸಿದ ಇಬ್ಬರು ಹಿರಿಯ ಅಧಿಕಾರಿಗಳ ನಿರಂತರ ಒತ್ತಡದಿಂದಾಗಿ ತಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ ಎಂದು ಎಂಜಿನಿಯರ್ ಸ್ಪಷ್ಟವಾಗಿ ಆರೋಪಿಸಿದ್ದಾರೆ.
ಜ್ಯೋತಿಷಾ ದಾಸ್‌ಯ ಕುಟುಂಬವು ಔಪಚಾರಿಕ ಪೊಲೀಸ್ ದೂರು ದಾಖಲಿಸಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದಿನೇಶ್ ಮೇಧಿ ಶರ್ಮಾ ಮತ್ತು ಅಮೀನುಲ್ ಇಸ್ಲಾಂ ಅವರನ್ನು ಬಂಧಿಸಲಾಗಿದೆ. ಈ ಘಟನೆಯ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವರವಾದ ತನಿಖೆಗೆ ಆದೇಶ ನೀಡಿದ್ದಾರೆ. ಆರೋಪಿತರಿಗೆ ಸಂಬಂಧಿಸಿದ ಕಟ್ಟಡದ ಕಾಮಗಾರಿಯನ್ನು ಮತ್ತೆ ಪರಿಶೀಲಿಸಲಾಗುತ್ತಿದೆ.