newsics.com
ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ.
ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.
ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಮೃತ ದುರ್ದೈವಿಗಳು. ಮೃತರು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. .
ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.