newsics.com
ಬೆಂಗಳೂರು: ಅನುಕಂಪದ ಆಧಾರದ ಮೇಲೆ ಕರ್ನಾಟಕ ರಾಜ್ಯ ಸಾರಿಗೆ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.
ಇದೇ ವೇಳೆ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರವನ್ನೂ ವಿತರಣೆ ಮಾಡಿದರು. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ವಿತರಣೆ.
ಅಲ್ಲದೆ, ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್‌ಗಳಿಗೂ ಚಾಲನೆ ನೀಡಲಾಯಿತು.

ಸಾರಿಗೆ ಸಿಬ್ಬಂದಿ ಹಗಲಿರುಳು ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಅಧಿಕಾರಿಗಳಾದ ರಾಮಚಂದ್ರನ್, ಪ್ರಿಯಾಂಗಾ, ಡಾ. ಸುಶೀಲಾ ಬಿ., ಡಾ. ನಂದಿನಿದೇವಿ ಕೆ., ಇಬ್ರಾಹಿಂ ಮೈಗೂರ ಮತ್ತಿತರರಿದ್ದರು.
ಸಾಲ ತೀರಿಸಿಲ್ಲ ಅಂದ್ರೂ ಇಲ್ಲಿ ಆರಾಂ ಆಗಿ ಇರಿ ಅಂತಿದೆ ಈ ಕಂಪನಿ! ಏನಿದು ಮಾಸ್ಟರ್ ಪ್ಲ್ಯಾನ್?