newsics.com
ಪುಣೆ: ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇnಲ್ಲಿ ಶನಿವಾರ ಸುರಂಗದ ಪ್ರವೇಶದ್ವಾರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಕಂಟೇನರ್ ಟ್ರೇಲರ್ ಟ್ರಕ್ 20 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲೆಯ ಖಲಾಪುರ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಬ್ರೇಕ್ ವೈಫಲ್ಯದ ಪರಿಣಾಮ ಕಂಟೇನರ್ ಟ್ರೇಲರ್ ಟ್ರಕ್‌ನ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಕನಿಷ್ಠ 20 ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ .
ಅಪಘಾತದ ಪರಿಣಾಮ ಎಕ್ಸ್‌ಪ್ರೆಸ್‌ವೇ ನಲ್ಲಿ ಹಲವಾರು ಗಂಟೆಗಳ ಕಾಲ ಜಾಮ್ ಆಗಿತ್ತು. 5 ಕಿಲೋಮೀಟರ್‌ಗಳವರೆಗೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. . ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಂಚಾರವನ್ನು ಇತರ ಮಾರ್ಗಗಳಿಗೆ ತಿರುಗಿಸಲಾಗಿದೆ,