newsics.com
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಚೇರಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತ ಕಿಡಿಗೇಡಿಗಳು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.
ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಇ–ಮೇಲ್ನಿಂದ ಟರ್ಮಿನಲ್ ವ್ಯವಸ್ಥಾಪಕರ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ವಿಮಾನ ನಿಲ್ದಾಣದ ಎರಡು ಟರ್ಮಿನಲ್ನಲ್ಲಿ ನಾಲ್ಕು ಕಚ್ಚಾಬಾಂಬ್ಗಳನ್ನು (ಐಇಡಿ) ಇಡಲಾಗಿದೆ. ಅದು ಸ್ಫೋಟಗೊಳ್ಳಲಿವೆ. ಇದಾದ ಎರಡು ಗಂಟೆಯ ಬಳಿಕ ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುತ್ತೇನೆ ಎಂಬುದಾಗಿ ಇ– ಮೇಲ್ನಲ್ಲಿ ಬರೆಯಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.
ಈ ಬೆದರಿಕೆ ಸಂದೇಶ ಬಂದ ಕೂಡಲೇ ಡಿಸಿಎಂ ಕಚೇರಿಗೂ ಮಾಹಿತಿ ರವಾನಿಸಲಾಗಿದ್ದು, ಮನೆ ಮತ್ತು ಕಚೇರಿ ಮತ್ತು ವಿಮಾನ ನಿಲ್ದಾಣದ ಪ್ರತಿ ಸ್ಥಳವನ್ನು ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
https://www.newsics.com/2025/07/27/fishing-boat-sinks-three-missing/