newsics.com
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ.ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದ್ದು, ವರುಣಾರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿದಂತೆ ಉಳಿದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.