newsics.com
ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನಲೆ ಅಲ್ಲಲ್ಲಿ ಭೂಮಿ ಕುಸಿಯುತ್ತಿದೆ. ಹೀಗಾಗಿ 60ಕ್ಕೂ ಹೆಚ್ಚು ಕುಟುಂಬಗಳು ಮನೆ ತೊರೆದಿವೆ.
ಭೂಮಿ ಕುಸಿದ ಸ್ಥಳಕ್ಕೆ ಟಾರ್ಪಲ್ ಹೊದಿಸಿ ರಕ್ಷಿಸಲು ಪ್ರಯತ್ನಿಸಲಾಗಿದೆ. ಸದ್ಯ ನಿವಾಸಿಗಳಲ್ಲಿ ತೀವ್ರ ಆತಂಕ ಉಂಟಾಗಿದೆ.
ಭಾರಿ ಗಾಳಿಗೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಸದ್ಯ ಎನ್ಡಿಆರ್ಎಫ್ ಮತ್ತು ಕೊಡಗು ಜಿಲ್ಲಾಡಳಿತ ಕಟ್ಟೆಚ್ಚರವಹಿಸಿದೆ.
ಅಷ್ಟೇ ಅಲ್ಲದೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದಿರುವಂತಹ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ನಡೆದಿದೆ. ಕಾರು ಚಾಲಕ ಚರಣ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾರಂಗಿ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಹಾರಂಗಿ ಮತ್ತು ಕಾವೇರಿ ನದಿ ಹರಿಯುತ್ತಿವೆ. ಸದ್ಯ ಜಿಲ್ಲೆಯ ಕುಶಾಲನಗರ ತಾಲೂಕಿನ ಹುದುಗೂರು ವ್ಯಾಪ್ತಿಯಲ್ಲಿ ತೋಟ ಮತ್ತು ಗದ್ದೆಗಳಿಗೆ ನೀರು ನುಗ್ಗಿದೆ. ಹೊರ ಹರಿವು ಹೆಚ್ಚಾದರೆ ಮನೆಗಳಿಗೆ ನೀರು ನುಗ್ಗುವ ಆತಂಕ ಕೂಡ ಶುರುವಾಗಿದೆ.