newsics.com
ಡೆಹ್ರಾಡೂನ್: ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ, 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಪೊಲೀಸರು, ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗರ್ವಾಲ್ ಡಿವಿಷನ್ ಕಮಿಷನರ್ ತಿಳಿಸಿದ್ದಾರೆ.