newsics.com
ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ವೈದ್ಯಕೀಯ ಮೂಲಗಳ ಪ್ರಕಾರ, ಮಿಲಿಂದ್ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ವಿವರಗಳನ್ನು ಕುಟುಂಬದವರು ಅಥವಾ ಆಸ್ಪತ್ರೆಯ ಮೂಲಗಳು ಇನ್ನೂ ಸ್ಪಷ್ಟಪಡಿಸಿಲ್ಲ, ಆದರೆ ತಜ್ಞ ವೈದ್ಯರ ತಂಡವು ಅವರ ಆರೈಕೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ.
ಖರ್ಗೆಯವರ ಮಕ್ಕಳ ಪೈಕಿ ಕಿರಿಯವರಾದ ಮಿಲಿಂದ್ ಖರ್ಗೆ, ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಿಂದ ಎಂಬಿಎ ಪದವೀಧರರಾಗಿದ್ದು, ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಹಿರಿಯ ಸಹೋದರ ಪ್ರಿಯಾಂಕ್ ಖರ್ಗೆ ಹೊರತುಪಡಿಸಿದರೆ ಕಿರಿಯ ಸಹೋದರರು ರಾಜಕೀಯದಲ್ಲಾಗಲಿ, ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
AI technology 20 ವರ್ಷ ವಾರೆಂಟಿಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಎಐ ತಂತ್ರಜ್ಞಾನ