newsics.com
ಶ್ರೀನಗರ: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶ್ರೀನಗರದಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ. ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ.
ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.
ಈ ಸಂದರ್ಭದಲ್ಲಿ, ಅವರ ಚಲನವಲನಗಳನ್ನು ಗುರುತಿಸಿದ ಸೇನೆಯು ಭಯೋತ್ಪಾದಕರನ್ನು ಸುತ್ತುವರೆದಿತ್ತು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು.
ಭಾರತ ಆಪರೇಷನ್ ಸಿಂಧೂರ್ ಎಂಬ ಪ್ರತಿದಾಳಿ ನಡೆಸಿತು. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಿಖರವಾದ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು.
ಈ ದಾಳಿಯ ಜವಾಬ್ದಾರಿಯನ್ನು ಆರಂಭದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ (LET)ದ ಒಂದು ಭಾಗವೆಂದು ಪರಿಗಣಿಸಲಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ವಹಿಸಿಕೊಂಡಿತು. ನಂತರ ಅದು ಈ ದಾಳಿಯಲ್ಲಿ ಯಾವುದೇ ಪಾತ್ರವಿರುವುದನ್ನು ನಿರಾಕರಿಸಿತು.
Life style ಬಾತ್‌ರೂಂ ಕಲೆಗಳನ್ನ ಈಸಿಯಾಗಿ ಕ್ಲೀನ್ ಮಾಡಬೇಕಾ?; ಈ ರೀತಿ ಟ್ರೈ ಮಾಡಿ