Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala ಶವ ಹೂತುಹಾಕಿದ ಪ್ರಕರಣ: ಧರ್ಮಸ್ಥಳ ಗ್ರಾಮದಲ್ಲಿ ಒಂದೇ ದಿನ 15 ಸ್ಥಳ ಗುರುತಿಸಿದ ಅನಾಮಿಕ!
ಕರ್ನಾಟಕಪ್ರಮುಖ

Dharmasthala ಶವ ಹೂತುಹಾಕಿದ ಪ್ರಕರಣ: ಧರ್ಮಸ್ಥಳ ಗ್ರಾಮದಲ್ಲಿ ಒಂದೇ ದಿನ 15 ಸ್ಥಳ ಗುರುತಿಸಿದ ಅನಾಮಿಕ!

Share
2 Min Read
SHARE

newsics.com

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಘಟನೆಯಲ್ಲಿ ಸೋಮವಾರ ಮಹತ್ವದ ಬೆಳವಣಿಗೆಗಳು ನಡೆದಿದ್ದು , ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ಅನಾಮಿಕ ವ್ಯಕ್ತಿ ತಾನು ಮೃತದೇಹಗಳನ್ನ ಹೂತು ಹಾಕಿರುವ 15 ಸ್ಥಳಗಳನ್ನು ಗುರುತಿಸಿದ್ದಾನೆ.

ಪೊಲೀಸರು ಈ 15 ಸ್ಥಳಗಳ ಸುತ್ತ ಟೇಪ್ ಕಟ್ಟಲಾಗಿದ್ದು ಈ ಸ್ಥಳಗಳಲ್ಲಿ ರಾತ್ರಿ ಪೊಲೀಸ್ ಗಸ್ತು ನಿಯೋಜಿಸಲಾಗಿದೆ.

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಪರಿಸರದಲ್ಲಿಯೇ ಈ 15 ಸ್ಥಳಗಳನ್ನು ಆತ ಗುರುತಿಸಿದ್ದಾನೆ. ಸ್ನಾನ ಘಟ್ಟದ ಒಳಗೆ ನದಿ ಬದಿಯಲ್ಲಿ ಮೊದಲ ಸ್ಥಳವನ್ನು ಆತ ಗುರುತಿಸಿದ್ದಾನೆ. ಅಲ್ಲಿಂದ ಮುಂದೆ ಅರಣ್ಯದೊಳಗೆ ಆತನೊಂದಿಗೆ ಎಸ್.ಐ.ಟಿ ತಂಡದವರು ತೆರಳಿದ್ದು ಅಲ್ಲಿ ಆತ ಎಂಟು ಸ್ಥಳಗಳನ್ನು ಗುರುತಿಸಿದ್ದಾನೆ.

ಬಳಿಕ ನೇತ್ರಾವತಿ ಸ್ನಾಘಟ್ಟದಿಂದ ನೂರು ಮೀಟರ್ ಮುಂದೆ ಧರ್ಮಸ್ಥಳ ಉಜಿರೆ ರಸ್ತೆಯ ಬದಿಯಲ್ಲಿ ಹೆದ್ದಾರಿಯಿಂದ ಎರಡು ಮೂರು ಮೀಟರ್ ದೂರದಲ್ಲಿ ಈತ ಮೂರು ಸ್ಥಳಗಳನ್ನು ಗುರುತಿಸಿದ್ದಾನೆ.

ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿಗೆ ಹೋಗುವ ರಸ್ತೆಯ ಬದಿಯಲ್ಲಿ ಕಿಂಡಿ ಅಣೆಕಟ್ಟಿಗೆ ತಾಗಿಕೊಂಡಿರುವ ಪ್ರದೇಶದಲ್ಲಿ ಮತ್ತೊಂದು ಸ್ಥಳವನ್ನು ಗುರುತಿಸಿದ್ದಾನೆ ಇಲ್ಲಿ ದೊಡ್ಡದಾದ ಸ್ಥಳದ ಸುತ್ತ ಮಾರ್ಕ್ ಮಾಡಲಾಗಿದೆ.

ಬಳಿಕ ಸಾಕ್ಷಿ ದೂರುದಾರ ಎಸ್.ಐ.ಟಿ ತಂಡವನ್ನು ಧರ್ಮಸ್ಥಳ ಕನ್ಯಾಡಿಯ ಒಳಪ್ರದೇಶದಲ್ಲಿ ಖಾಸಗಿ ಜಾಗವೊಂದಕ್ಕೆ ಕರೆದೊಯ್ದಿದ್ದು ಅಲ್ಲಿ ಸ್ಥಳವೊಂದನ್ನು ತೋರಿಸಿದ್ದಾನೆ. ಈ ವೇಳೆಗೆ ಸಂಜೆಯಾಗಿದ್ದು ಮಳೆಯೂ ಬಂದ ಕಾರಣ ಸ್ಥಳ ಗುರುತಿಸುವ ಕಾರ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಅಲ್ಲಿಂದ ಎಸ್.ಐ.ಟಿ ತಂಡ ಇಂದಿನ ಕಾರ್ಯಾಚರಣೆಯನ್ನು ನಿಲ್ಲಿಸಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಹಿಂತಿರುಗಿದೆ.

ಎಸ್‌ಐಟಿ ತಂಡ ಸೋಮವಾರ ಬೆಳಗ್ಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದು 9 ಗಂಟೆಯ ಸುಮಾರಿಗೆ ಎಸ್.ಪಿ ಅನುಚೇತ್ ನೇತೃತ್ವದ ತಂಡ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬಂದಿದೆ.

ಅಲ್ಲಿ ಕಂದಾಯ ಇಲಾಖೆ,‌ ಅರಣ್ಯ ಇಲಾಖೆ, ಸರ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ 11 ಗಂಟೆಯ ಸುಮಾರಿಗೆ ಸಾಕ್ಷಿ ದೂರುದಾರ ಎಸ್.ಐ.ಟಿ ಕಚೇರಿಗೆ ವಕೀಲರುಗಳೊಂದಿಗೆ ಆಗಮಿಸಿದ್ದಾನೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳು ಆತನಿಂದ ಮಾಹಿತಿ ಪಡೆಯುವ ಕಾರ್ಯ ಮಾಡಿದ್ದಾರೆ.

ಬಳಿಕ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಎಸ್.ಐ.ಟಿ ತಂಡದವರು ನೇತ್ರಾವತಿ ಸ್ನಾನಘಟ್ಟದ ಬಳಿಗೆ ಬಂದಿದ್ದಾರೆ. ಅಲ್ಲಿಂದ ಮೂರು ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆದಿದೆ. 3 ಗಂಟೆಗೆ ಧರ್ಮಸ್ಥಳ ಠಾಣೆಗೆ ಊಟಕ್ಕೆ ತೆರಳಿದ್ದು ಬಳಿಕ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ ಆರಂಭವಾಗಿ ಆರು ಗಂಟೆಯವರೆಗೂ ಮುಂದುವರಿದಿದೆ.

ಮಂಗಳವಾರವೂ ಸ್ಥಳ ಗುರುತಿಸುವಿಕೆ:
ಸೋಮವಾರ ಸುಮಾರು 15 ಸ್ಥಳಗಳನ್ನು ಸಾಕ್ಷಿ ದೂರುದಾರ ಗುರುತಿಸಿದ್ದಾನೆ. ರಾತ್ರಿ ಕಾರ್ಯಾಚರಣೆ ಮಾಡುವಂತಿಲ್ಲ. ಭಾರೀ ಮಳೆಯೂ ಇರುವ ಕಾರಣ ಸೋಮವಾರದ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಮಂಗಳವಾರ ಬೆಳಗಿನಿಂದಲೇ ಸ್ಥಳಗಳನ್ನು ಗುರುತಿಸುವ ಕಾರ್ಯವನ್ನು ಪುನರಾರಂಭಿಸಲಾಗುವುದು. ಬಳಿಕ ಮುಂದಿನ ಕಾರ್ಯಾಚರಣೆ ನಡೆಸಲಿದ್ದೇವೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆಟ್ಟ ಕಮೆಂಟ್ ಮಾಡ್ತಾರೆಂದು 30 ಲಕ್ಷ ಜನರನ್ನು ಬ್ಲಾಕ್ ಮಾಡಿದ್ರಂತೆ ಈ ನಟಿ! ಟ್ರೋಲ್ ಆಗಿದ್ದೇಕೆ?

TAGGED:Burial case: Anonymous person identifies 15 locations in Dharmasthala village in a single day!
Share This Article
Facebook Twitter Copy Link Print
Previous Article ಇದು ವಿಶ್ವದ ಅತಿ ದುಬಾರಿ ಲೋಹ; ಇದರ ಮಿಲಿ ಗ್ರಾಮ್‌ಗೆ ಕೋಟಿ‌ ಕೋಟಿ ಬೆಲೆ!
Next Article GOOD MORNING Today’s prediction ಇಂದಿನ ರಾಶಿ ಭವಿಷ್ಯ, 29-07-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?