Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಮತ್ತೆ ಮುಂದೂಡಿಕೆ
ಕರ್ನಾಟಕಪ್ರಮುಖ

Prajwal Revanna ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಮತ್ತೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಸರಣಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆರಡು ದಿನ ಮುಂದೂಡಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪು ಮುಂದೂಡಲು ಕಾರಣವೇನು?
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ಜಡ್ಜ್ ಸಂತೋಷ್ ಗಜಾನನ ಭಟ್ ತಿಳಿಸಿದರು.
ಕೆಆರ್ ನಗರದ ಮಹಿಳೆಯ ಅಪಹರಣ, ಅತ್ಯಾಚಾರ ಪ್ರಕರಣದ ಹಿನ್ನೆಲೆ
ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ.
ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.
ಒಂದು ವೇಳೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಂದಿನ ದರಪಟ್ಟಿ ಎಷ್ಟು?

TAGGED:Prajwal Revanna rape case: Verdict against Prajwal Revanna postponed again
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಂದಿನ ದರಪಟ್ಟಿ ಎಷ್ಟು?
Next Article ಧರ್ಮಸ್ಥಳ ಪ್ರಕರಣ : 2ನೇ ದಿನವೂ ಸಿಗದ ಯಾವುದೇ ಅಸ್ತಿಪಂಜರ, ಮುಂದುವರೆದ ಶೋಧ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?