newsics.com
ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಅವರ ಕೊನೆಯ ಆಸೆಯಂತೆ ವ್ಯಕ್ತಿಯೊಬ್ಬರು ನೃತ್ಯ ಮಾಡಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಜವಾಸಿಯಾ ಗ್ರಾಮದಲ್ಲಿ ನಡೆದಿದೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೋಹಲ್ ಲಾಲ್ ಜೈನ್ ಎಂಬುವವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು, ತನ್ನ ಆತ್ಮೀಯ ಗೆಳೆಯ ಅಂಬಾಲಾಲ್ ಪ್ರಜಾಪತಿಗೆ ಪತ್ರ ಬರೆದು, ತಮ್ಮ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ನೃತ್ಯ ಮಾಡಬೇಕೆಂದು ಬಯಸಿದ್ದರು.
ನನ್ನ ಅಂತ್ಯಕ್ರಿಯೆ ನಡೆಯುವಾಗ ಆತ ಅಳು ಮೊಗದಲ್ಲಿ ಇರಬಾರದು ನಗು ನಗುತ್ತಾ ನನ್ನನ್ನು ಕಳುಹಿಸಿಕೊಡಬೇಕು ಎಂದು ಆಶಿಸಿದ್ದರು. ಕಣ್ಣೀರು ಹಾಗೂ ನಗುವಿನ ಈ ಸಂಗಮವನ್ನು ನೋಡಿ ಗ್ರಾಮಸ್ಥರು ಭಾವುಕರಾದರು. ಎಲ್ಲರೂ ಈ ವಿಶಿಷ್ಟ ಹಾಗೂ ಹೃದಯಸ್ಪರ್ಶಿ ದೃಶ್ಯವನ್ನು ನೀಡಿ ಮೆಚ್ಚಿದ್ದಾರೆ. ಇಂದಿನ ಕಾಲದಲ್ಲಿ ಇಂಥಾ ಸ್ನೇಹ ಅಪರೂಪ ಎಂದು ಜನರು ಕೊಂಡಾಡಿದರು.ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.