newsics.com
ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕಗೊಂಡಿದ್ದಾರೆ.
ಅವರ ನೇಮಕಾತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, “ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ” ಎಂದು ತಮ್ಮ ನೇಮಕ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ತನ್ನ ಮೇಲೆ ನಂಬಿಕೆ ಇರಿಸಿ, ಈ ಹುದ್ದೆ ನೀಡಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.