newsics.com
ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್‌ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರುಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲು ಮುಂದಾಗಿದೆ.
ಈ ಆ್ಯಂಬುಲೆನ್ಸ್‌ಗಳಿಗೆ ಸರ್ಕಾರವೇ ದರ ನಿಗದಿ ಮಾಡಲಿದೆ. ಅಗತ್ಯ ಇರುವವರು ಮೊಬೈಲ್ ಆ್ಯಪ್ ಬಳಸಿ ಅವುಗಳ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇದಕ್ಕಾಗಿ ರಾಜ್ಯದಲ್ಲಿನ ವೈದ್ಯಕೀಯ ಆಂಬ್ಯುಲೆನ್ಸ್ ಸೇವೆಯನ್ನು ಇನ್ನು ಮುಂದೆ ಕರ್ನಾಟಕ ಖಾಸಗಿ ವೈದ್ಯ ಸಂಸ್ಥೆ (ಕೆಪಿಎಂಇ) ಕಾನೂನಿನ ಅಡಿಯಲ್ಲಿ ತರಲು ನಿರ್ಧರಿಸಿದ್ದು, ಈ ಕುರಿತಂತೆ ಬರುವ ವಿಧಾನಸಭೆಯ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.