newsics.com
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದ್ದು, ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಬಿ. ದಯಾನಂದ್ ಅವರಿಗೆ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ನಿಯೋಜಿಸಲಾಗಿದೆ.
ಅಮಾನತು ರದ್ದುಗೊಂಡಿದ್ದ ಡಿಸಿಪಿ(ಕೇಂದ್ರ) ಶೇಖರ್ ಹೆಚ್.ಟಿ. ಅವರು ಈಗ ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿ ಆಗಿದ್ದಾರೆ. ಐಪಿಎಸ್ ಅಧಿಕಾರಿ ಶೇಖರ್ ಅವರನ್ನು ಗುಪ್ತಚರ ಇಲಾಖೆಯ ಎಸ್ಪಿ ಹುದ್ದೆಗೆ ನಿಯೋಜನೆ ಮಾಡಲಾಗಿದೆ.