newsics.com
ಪಾಟ್ನಾ:ನಿಂತಿದ್ದ ಟ್ರಕ್ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯ ಟೆಟರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುವೆ ಗ್ರಾಮದ ಬಳಿಯ ಲಖಿಸರೈ-ಜಮುಯಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಸಮಷ್ಟಿಪುರ ಜಿಲ್ಲೆಯ ಪಂಕಜ್ ಕುಮಾರ್, ಸರೋಜ್ ಕುಮಾರ್ ಮತ್ತು ನಳಂದ ಜಿಲ್ಲೆಯ ಸಾಹಿಲ್ ಕುಮಾರ್ ಎಂದು ಗುರುತಿಸಲಾಗಿದ್ದು,
ಶಿವಸೋನಾ ಎಂಜಿನಿಯರಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ರೈಲು ಹಿಡಿಯಲು ಸಿಎನ್ಜಿ ಚಾಲಿತ ಆಟೋರಿಕ್ಷಾದಲ್ಲಿ ಲಖಿಸರೈಗೆ ಪ್ರಯಾಣಿಸುತ್ತಿದ್ದ ವೇಳೆ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
https://www.newsics.com/2025/07/31/former-tamil-nadu-cm-panneer-selvam/