ಅತ್ಯಾಚಾರ ಆರೋಪ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

newsics.com ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ  ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು  ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಚೌಹಾಣ್ ಪುತ್ರನ ಪರ ವಕೀಲ ಎಂ.ಎಂ.ಗೋಡ್ಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ (ಜು.29) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ (ಜು.31) ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು … Continue reading ಅತ್ಯಾಚಾರ ಆರೋಪ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ