newsics.com
ದೆಹಲಿಯಿಂದ ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾದ ಬೋಯಿಂಗ್ 787-9 ವಿಮಾನ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಲಾಗಿದೆ.
ಕಾಕ್‌ಪಿಟ್ ಸಿಬ್ಬಂದಿ ಮಾರ್ಗಸೂಚಿಗಳನ್ನು (Sop) ಅನುಸರಿಸಿ ಟೇಕಾಫ್ ಸ್ಥಗಿತಕ್ಕೆ ನಿರ್ಧರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಾಗಿ ಲ್ಯಾಂಡಿಂಗ್ ಮಾಡಿದರು ಎಂದು ಏರ್‌ಲೈನ್ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಮಾನದ ಬದಲಿಗೆ ಪರ್ಯಾಯ ವಿಮಾನವನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.