newsics.com
ಧಾಮದ ಪಾವಿತ್ರ‍್ಯತೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಆಗಸ್ಟ್ 11 ರಿಂದ ಶ್ರೀ ಕಾಶಿ ವಿಶ್ವನಾಥ ಧಾಮದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮಂದಿರದ ಆಡಳಿತ ಮಂಡಳಿ ಘೋಷಿಸಿದೆ.
ಆಡಳಿತ ಮಂಡಳಿಯು ಧಾಮದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ.
ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವ ಭೂಷಣ್ ಮಿಶ್ರಾ ಮಾತನಾಡಿ, ಕಾಶಿ ವಿಶ್ವನಾಥ ಧಾಮ ಕೇವಲ ಆಧ್ಯಾತ್ಮಿಕ ಕೇಂದ್ರವಾಗಿರದೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ.
https://www.newsics.com/2025/07/31/are-there-so-many-uses-for-betel-leaves/