Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ

newsics.com ಕಾರವಾರ: ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನಡೆದಿದೆ. ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://www.newsics.com/2025/08/01/if-you-have-an-ant-infestation-at-home-follow-these-simple-tricks/