newsics.com
ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು.
ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ