newsics.com
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು.
ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.