newsics.com
ಶಿಮ್ಲಾ: ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದಕುಲ್ಲು ಜಿಲ್ಲೆಯ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಅಣೆಕಟ್ಟು ಕುಸಿದಿದೆ.
ನೀರಿನ ರಭಸಕ್ಕೆ ಕ್ರೇನ್, ಟ್ರಕ್, ರಾಕ್ ಬ್ರೇಕರ್ ಮತ್ತು ಕಾರು ಸೇರಿದಂತೆ ಅಣೆಕಟ್ಟು ಬಳಿ ಇದ್ದ ಭಾರೀ ಯಂತ್ರೋಪಕರಣಗಳು ಕೊಚ್ಚಿ ಹೋಗಿವೆ. ಡ್ಯಾಂ ಕುಸಿಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ನಿರಂತರ ಮಳೆಯಿಂದಾಗಿ ಭುಂತರ್ ಬಳಿ ಬಿಯಾಸ್ ನದಿಯೊಂದಿಗೆ ವಿಲೀನಗೊಳ್ಳುವ ಪಾರ್ವತಿ ನದಿಯ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ.