newsics.com
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಬಳಿಕ ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್ ಅಲ್ಲಿ ಹೀಗೆ ಬರೆದಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣವಾದ ಶಿಕ್ಷೆ ಆಗುತ್ತದೆ ಅಂತಲೇ ಬರೆದಿದ್ದಾರೆ. ಆದರೆ, ಎಲ್ಲೂ ರಮ್ಯಾ ಪ್ರಜ್ವಲ್ ರೇವಣ್ಣ ಹೆಸರು ಬರೆಯೋಕೆ ಹೋಗಿಲ್ಲ. ತಮಗೆ ಅನಿಸಿರೋ ಅಭಿಪ್ರಾಯವನ್ನು ಹೀಗೆ ಬರೆದುಕೊಂಡಿದ್ದಾರೆ ಅಂತಲೇ ಹೇಳಬಹುದು.
ಕೆ.ಆರ್.ನಗರ ಮೂಲದ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಚಿತ್ರೀಕರಣ ಪ್ರಜ್ಕರನಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಹಾಗೂ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳಿವೆ. ಅವುಗಳಲ್ಲಿ ಒಂದು ಪ್ರಕರಣದ ಶಿಕ್ಷೆ ಘೋಷಣೆ ಆಗಿದೆ. ಜನಪ್ರತಿನಿಧಿಗಳ ಸ್ಪೆಷಲ್ ನ್ಯಾಯಾಲಯ ಈ ಒಂದು ಶಿಕ್ಷೆ ಪ್ರಕಟಿಸಿದೆ.
https://www.instagram.com/divyaspandana?igsh=ZjAzbDA1YTcyYWJj