newsics.com
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೋಷಿ ಎಂದು ಪರಿಗಣಿಸಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಆಗಸ್ಟ್ 2ರಿಂದಲೇ ಅಪರಾಧಿಯಾಗಿ ಪ್ರಜ್ವಲ್ ರೇವಣ್ಣ ಸೆರೆವಾಸ ಶುರುವಾಗಿದೆ. ಮಾಡಿದ ತಪ್ಪಿಗೆ ಪ್ರಜ್ವಲ್ ರೇವಣ್ಣ ಜೀವನ ಪರ್ಯಂತ ಜೈಲುವಾಸ ಅನುಭವಿಸುವಂತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಮಹತ್ವದ ತೀರ್ಪು ನೀಡಿದ್ರು.
ಶಿಕ್ಷೆಯ ಪ್ರಮಾಣ ಕೇಳಿ ಗಳಗಳನೆ ಅತ್ತ ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲೂ ನಿದ್ದೆ ಬರ್ತಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲೇ ಪ್ರಜ್ವಲ್ ರೇವಣ್ಣ ಬದುಕಿರುವವರೆಗೂ ಜೀವನ ಕಳೆಯಬೇಕಿದೆ. ನಿನ್ನೆ ಶಿಕ್ಷೆ ಪ್ರಮಾಣ ಘೋಷಣೆಯಾದ ಬಳಿಕ ನೊಂದಿರುವ ಪ್ರಜ್ವಲ್ ರೇವಣ್ಣ ರಾತ್ರಿಯೆಲ್ಲಾ ನಿದ್ದೆ ಮಾಡಿಲ್ಲ ಎನ್ನಲಾಗ್ತಿದೆ.
ಜೀವನಪರ್ಯಂತ ಜೈಲಿನಲ್ಲೇ ಕಾಲಕಳೆಯಬೇಕಾ ಪ್ರಜ್ವಲ್‌ಗೆ ಭವಿಷ್ಯದ ದಿನಗಳ ಬಗ್ಗೆಯೇ ಚಿಂತೆಯಾಗಿದೆಯಂತೆ. ತಡರಾತ್ರಿವರೆಗೆ ಜೈಲಿನ ಪುರುಷ ಬ್ಯಾರಕ್ ಕೊಠಡಿಯಲ್ಲಿ ಪ್ರಜ್ವಲ್ ಒಬ್ಬಂಟಿಯಾಗಿ ಕುಳಿತಿದ್ದ. ಚಿಂತೆಗೆ ಜಾರಿದ್ದ ಪ್ರಜ್ವಲ್ ರಾತ್ರಿ ಊಟ ಕೂಡ ಮಾಡಿಲ್ಲ ಎನ್ನಲಾಗ್ತಿದೆ.
ಏನಿದು ಪ್ರಕರಣ?
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
https://www.newsics.com/2025/08/03/the-man-who-married-four-women-from-the-same-school/