newsics.com
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 5 ರಿಂದ 7 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಭಾರಿಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಆ.05) ಸಾಧಾರಣ ಮಳೆಯಾಗಲಿದೆ.