newsics.com
ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಿದೆ.
ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯದಿಂದ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಭಾಗಶಃ ಅರ್ಜಿ ವಿಚಾರಣೆ ನಡೆಸಿ ಅದನ್ನ ಬಿಡುಗಡೆ ಮಾಡಿದ್ರೆ ಅರ್ಜಿದಾರರ ಪರ ವಕೀಲರು ನನ್ನ ಬಗ್ಗೆ ಏನೆಂದುಕೊಳ್ಳುತ್ತಾರೆ ಎಂದು ಹೈಕೋರ್ಟ್‌ನ ನ್ಯಾ.ಇಎಸ್ ಇಂದಿರೇಶ್ ಪ್ರಶ್ನೆ ಮಾಡಿದರು.
ಪ್ರಕರಣದ ಹಿನ್ನೆಲೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಸೇರಿ ಮತ್ತಿತರರು ಕೇತಗಾನಹಳ್ಳಿಯಲ್ಲಿ 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಈ ಅರ್ಜಿ ಪರಿಶೀಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಹೆಚ್‌ಡಿಕೆ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.
https://www.newsics.com/2025/08/05/husband-says-save-me-again-save-my-wife-first/