newsics.com
ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗುತ್ತಿದೆ. 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ಇಂದಿನಿಂದ ಆಗಸ್ಟ್ 7ರ ವರೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.