Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Smart Meter Scam: ಸ್ಮಾರ್ಟ್ ಮೀಟರ್ ಅಕ್ರಮ ಆರೋಪ – ಸಚಿವ ಕೆ.ಜೆ ಜಾರ್ಜ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್.!
ಕರ್ನಾಟಕ

Smart Meter Scam: ಸ್ಮಾರ್ಟ್ ಮೀಟರ್ ಅಕ್ರಮ ಆರೋಪ – ಸಚಿವ ಕೆ.ಜೆ ಜಾರ್ಜ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್.!

Share
1 Min Read
SHARE

newsics.com

ಬೆಂಗಳೂರು: ‘ಸ್ಮಾರ್ಟ್ ಮೀಟರ್’ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರು ಜನಪ್ರತಿನಿಧಿಯಾಗಿದ್ದಾರೆ. ಅವರ ವಿರುದ್ಧದ ವಿಚಾರಣೆಗೆ ಭ್ರಷ್ಟಾಚಾರ ತಡೆ ಕಾಯಿದೆ ಸೆಕ್ಷನ್‌ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದರೆ, ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ವಿಚಾರಣೆಗೆ ಪರಿಗಣಿಸಲಾಗಿದೆ. ಇದು ಕಾನೂನುಬಾಹಿರ” ಎಂದು ಪೀಠಕ್ಕೆ ವಿವರಿಸಿದರು.ಇದನ್ನು ಪರಿಗಣಿಸಿದ ಪೀಠ, ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

ಶಾಸಕರಾದ ಸಿ.ಎಸ್.ಅಶ್ವತ್ ನಾರಾಯಣ್, ಎಸ್.ಆರ್.ವಿಶ್ವನಾಥ್ ಮತ್ತು ದೀರಜ್ ಮುನಿರಾಜ್ ಅವರಿಂದ ಸಚಿವ ಕೆ.ಜೆ.ಚಾರ್ಜ್ ಮತ್ತು ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಏನಿದು ಅಕ್ರಮದ ಆರೋಪ?

ಸ್ಮಾರ್ಟ್ ಮೀಟರ್ ಅಳವಡಿಕೆ ಮತ್ತು ಸೇವೆ ಒದಗಿಸುವ ಸಂಬಂಧ, 2024ರ ಸೆಪ್ಟೆಂಬರ್ 26ರಂದು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ನೇರವಾಗಿ ಟೆಂಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಪ್ರಕ್ರಿಯೆಯು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (KTPP) ಕಾಯ್ದೆ-2000 ಮತ್ತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಯಾವುದೇ ಪಾರದರ್ಶಕ ಪ್ರಕ್ರಿಯೆಯನ್ನು ಪಾಲಿಸದೆ, ಏಕಾಏಕಿ ಒಂದು ಕಂಪನಿಗೆ ಗುತ್ತಿಗೆ ನೀಡಿರುವ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ

TAGGED:#SmartMeter #Scam #illegal #HighCourt #Minister #KJGeorge
Share This Article
Facebook Twitter Copy Link Print
Previous Article Tirumala AI Darshan: ತಿರುಮಲ ದರ್ಶನಕ್ಕೆ ಎಐ ಬಳಕೆ: ಏನಿದು ವಿವಾದ?
Next Article ಹಿಮಾಚಲ ಪ್ರದೇಶದಲ್ಲೂ ಮೇಘಸ್ಫೋಟ: 400 ಕ್ಕೂ ಹೆಚ್ಚು ಯಾತ್ರಿಕರ ರಕ್ಷಣೆ, ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?