newsics.com
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೈಯ್ಯದ್ ಯಾಸೀನ್‌ನ ಬ್ಯಾಂಕ್ ಖಾತೆ ಸೀಜ್ ಮಾಡಲಾಗಿದೆ.
ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ.ಕೃತ್ಯದಲ್ಲಿ ಐಸಿಸ್ ಉಗ್ರ ಸಂಘಟನೆಯ ಪಾತ್ರ ದೃಢ, ಕುಕ್ಕರ್ ಬಾಂಬ್ ಎಲ್ಲಿ ಸ್ಫೋಟಿಸಲು ಸಂಚು ನಡೆದಿತ್ತು ಗೊತ್ತಾ? ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಟಾರ್ಗೆಟ್ , ತನಿಖೆಯಲ್ಲಿ ಭಯಾನಕ ಸಂಗತಿಗಳು ಬಯಲಾಗಿದೆ.
ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತು. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್ ಟೈಮರ್ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್‌ಗೆ ನಿಗದಿ ಮಾಡಿದ್ದ ಪರಿಣಾಮ ಅದು ಮಾರ್ಗ ಮಧ್ಯೆಯೇ ಆಟೋರಿಕ್ಷಾದೊಳಗೆ ಸ್ಫೋಟವಾಗಿತ್ತು. ಐಸಿಸ್ ಆನ್‌ಲೈನ್ ಹ್ಯಾಂಡ್ಲರ್ ಕರ್ನಲ್ ಕಳುಹಿಸುತ್ತಿದ್ದ ಹಣವನ್ನು ಆರೋಪಿ ಮೊಹಮ್ಮದ್ ಶಾರೀಕ್ ಸ್ವೀಕರಿಸಲು ಮತ್ತೊಬ್ಬ ಆರೋಪಿ ಮಾಜ್ ಮುನೀರ್ ಈ ಅನಧಿಕೃತ ಬ್ಯಾಂಕ್ ಖಾತೆಗಳ ಮಾಹಿತಿ ನೀಡುತ್ತಿದ್ದ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಇ.ಡಿ. ತಿಳಿಸಿದೆ.