newsics.com
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಕೊಲೆ ಕೇಸ್ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಂಪುಟ ಸಹೋದ್ಯೋಗಿಗಳಿಗೆ ಘಟನೆಯ ವಿವರಗಳನ್ನು ನೀಡಿದ್ದು, ಪ್ರಕರಣದ ತನಿಖೆ ಮತ್ತು ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ಧರ್ಮಸ್ಥಳದ ಸೂಕ್ಷ್ಮ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನೂ ವಿವರಿಸಿದ್ದಾರೆ.
ಅಲ್ಲದೇ, ಧರ್ಮಸ್ಥಳ ಪ್ರಕರಣದ ತನಿಖೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ಒತ್ತಾಯಿಸಿದ್ದಾರೆ. “ಈಗಲೇ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಸ್‌ಐಟಿ ತನಿಖೆಯನ್ನು ಮುಂದುವರಿಸಿದ್ದು, ಅಸ್ಥಿಪಂಜರಗಳ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುವುದು,” ಎಂದು ಹೇಳಿದ್ದಾರೆ. ಪತ್ರಕರ್ತರ ಮೇಲಿನ ದಾಳಿಯನ್ನು ಖಂಡಿಸಿರುವ ಸಂಪುಟ, ಈ ಬಗ್ಗೆ ಕಠಿಣ ಕ್ರಮಕ್ಕೆ ಆದೇಶಿಸಿದೆ. ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರದಲ್ಲಿ ಇಂತಹ ಆರೋಪಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಘಟನೆಯ ಸತ್ಯಾಸತ್ಯತೆಯನ್ನು ತಿಳಿಯಲು ಎಸ್‌ಐಟಿಯ ವರದಿ ನಿರ್ಣಾಯಕವಾಗಿರುವುದಾಗಿ ತಿಳಿಸಿದ್ದಾರೆ.
ಘಟನೆ ಹಿನ್ನೆಲೆ
ಧರ್ಮಸ್ಥಳದಲ್ಲಿ 1995ರಿಂದ 2014ರವರೆಗೆ ಸಾಮೂಹಿಕ ಕೊಲೆ, ಅತ್ಯಾಚಾರ ಮತ್ತು ಗುಪ್ತ ಸಮಾಧಿಗಳ ಆರೋಪಗಳನ್ನು ಮಾಜಿ ಸ್ವಚ್ಛತಾ ಕಾರ್ಮಿಕನೊಬ್ಬ ಮಾಡಿದ್ದ. ಈ ಆರೋಪದ ಆಧಾರದ ಮೇಲೆ ರಾಜ್ಯ ಸರ್ಕಾರ ಜುಲೈ 19, 2025ರಂದು ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತು. ಈ ತಂಡವು ಈಗಾಗಲೇ ಹಲವು ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಿದ್ದು, ಒಂದು ಕಡೆ ಅಸ್ಥಿಪಂಜರ ಮತ್ತು ಮತ್ತೊಂದು ಕಡೆ ಕೆಲವು ಮೂಳೆ ತುಣುಕುಗಳು ಪತ್ತೆಯಾಗಿವೆ. ಈ ಎಲ್ಲವನ್ನೂ ಎಫ್ ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ.
Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ