newsics.com
ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕರಾವಳಿ ಸೇರಿ23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ & ಅತಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ ಹವಾಮಾನ ಇಲಾಖೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ರಾತ್ರಿ ಆದ್ರೆ ಸಾಕು ಜೋರು ಮಳೆ ಸುರಿಯುತ್ತಿದೆ. ಬೆಳಗ್ಗೆ ಬಿಸಿಲು ಇದ್ರೆ ಸಂಜೆ ಮೋಡ ಕವಿದ ವಾತಾವರಣವಾಗಿ, ರಾತ್ರಿ ಮಳೆ ಅಬ್ಬರಿಸುತ್ತಿದೆ. ಇಂದು ಸಹ ಮಳೆ ಬರುವ ಸಾಧ್ಯತೆ ಇದೆ.
https://www.newsics.com/2025/08/07/36-year-old-man-marries-82-year-old-grandmother/