newsics.com
ಉಧಂಪುರ: ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ವಾಹನ ಕಂದಕಕ್ಕೆ ಉರುಳಿದ್ದು, ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ಘಟನೆಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ವಾಹನವು ನೂರಾರು ಅಡಿಗಳಷ್ಟು ಕೆಳಗೆ ಉರುಳಿರುವುದರಿಂದ ಕೆಲವು ಸಾವುನೋವುಗಳು ಸಂಭವಿಸಿರಬಹುದು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, “ಕಾಂಡ್ವಾ-ಬಸಂತ್‌ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನಕ್ಕೆ ಅಪಘಾತ ಸಂಭವಿಸಿದ ಸುದ್ದಿ ಕೇಳಿ ಬೇಸರವಾಯಿತು” ಎಂದು ಬರೆದಿದ್ದಾರೆ.