Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?
ಕರ್ನಾಟಕದೇಶಪ್ರಮುಖ

ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?

Share
2 Min Read
SHARE

newsics.com

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿ ಶುಕ್ರವಾರ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದರಾದರೂ ಚುನಾವಣಾ ಆಯೋಗಕ್ಕೆ ದೂರು ಕೊಡದೆ ಹಿಂತಿರುಗಿದ್ದಾರೆ.

ಗುರುವಾರ (ಆ.7) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿ–ಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್ ಶುಕ್ರವಾರ ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ನೇರವಾಗಿ ಆರೋಪಿಸಿದರು. ಆದರೆ, ಮತಗಳ್ಳತನ ವಿರುದ್ಧ ಕರ್ನಾಟಕ ಚುನಾವಣೆ ಆಯೋಗಕ್ಕೆ ದೂರು ನೀಡದೇ ರಾಹುಲ್ ಗಾಂಧಿ ಹಾಗೇ ದೆಹಲಿಗೆ ಹಾರಿದ್ದಾರೆ.

ಹೀಗಾಗಿ‌ ಮೌಖಿಕ ಆರೋಪ ಮಾಡಿ ದೂರು ನೀಡದೇ ಹೋಗಿದ್ಯಾಕೆ ಎನ್ನುವ ಚರ್ಚೆಗಳು ಶುರುವಾಗಿವೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟದಲ್ಲಿ ರಾಹುಲ್ ಗಾಂಧಿ, ಕೇಂದ್ರದ ಚುನಾವಣಾ ಆಯೋಗದ ವಿರುದ್ಧ ಗುಡುಗಿದರು. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮತ್ತೊಮ್ಮೆ ಸಂವಿಧಾನ ಪುಸ್ತಕ ಹಿಡಿದು ವಾಗ್ದಾಳಿ ನಡೆಸಿದರು. ಮಹದೇವಪುರ ಕ್ಷೇತ್ರದಲ್ಲಿ 5 ವಿಧಗಳಲ್ಲಿ ಮತ ಕಳ್ಳತನವಾಗಿದೆ ಎಂದು ಪುನರುಚ್ಛರಿಸಿರು.

ಹೀಗೆ ಗಂಭೀರ ಆರೋಪ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನಾ ಸಮಾವೇಶ ಮುಗಿಯುತ್ತಿದ್ದಂತೆಯೇ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಲು ಹೋಗಲಿಲ್ಲ. ಬದಲಿಗೆ ಖಾಸಗಿ ಹೋಟೆಲ್‌ ಹಾಗೂ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೋಜನ ಸವಿದು ದೆಹಲಿಗೆ ಹಾರಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಕಾರ್ಯಕ್ರಮ ಮುಗಿದ ಬಳಿಕ ಚುನಾವಣಾ ಆಯೋಗ ಕಚೇರಿಗೆ ತೆರಳಿ ದೂರು ನೀಡುತ್ತೇವೆ ಎಂದಿದ್ದರು. ಆದರೆ ಯಾವುದೇ ದೂರು ನೀಡದೆ ರಾಹುಲ್ ಗಾಂಧಿ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಿ ಬಳಿಕ ಅಲ್ಲಿಂದ ಖರ್ಗೆ ನಿವಾಸಕ್ಕೆ ತೆರಳಿ ಅಲ್ಲಿಂದ HLA ಏರ್ಪೋರ್ಟ್‌ನಿಂದ ದೆಹಲಿಗೆ ಹಾರಿದ್ದಾರೆ.
ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಚುನಾವಣೆ ಆಯೋಗ, ಮತಗಳ್ಳತನ ಆರೋಪಕ್ಕೆ ಸಾಕ್ಷ್ಯ ನೀಡಿ ತನಿಖೆ ಮಾಡುತ್ತೇವೆ ಎಂದಿದೆ. ಡಿಕ್ಲರೇಷನ್ ಗೆ ಸಹಿ ಹಾಕುವಂತೆ ರಾಹುಲ್ ಗಾಂಧಿಗೆ ತಾಕೀತು ಮಾಡಿದೆ. ಇಲ್ಲದಿದ್ರೆ ಕ್ಷಮೆ ಕೇಳಿ ಎಂದು ಆಯೋಗ ಹೇಳಿದೆ. ಇನ್ನು ಡಿಕ್ಲರೇಷನ್‌ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆ ಸಾಧ್ಯತೆ ಇದೆ. ಕಾನೂನಿಗೆ ಹೆದರಿ ದೂರು ನೀಡಲು ರಾಹುಲ್‌ ಗಾಂಧಿ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ನಿನ್ನೆಯೇ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಮುಖ್ಯ ಆಯುಕ್ತ ಅನ್ಬುಕುಮಾರ್, ಡಿಕ್ಲೆರೇಷನ್ ಗೆ ಸಹಿ ಹಾಕಿ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದರು.

ಡಿಕ್ಲರೇಷನ್‌ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಯಾಗಲಿದೆ. ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆ ಶಿಕ್ಷಾರ್ಹವಾಗಿದೆ. 1950ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆ ಕಲಂ 31ರಂತೆ ಗರಿಷ್ಠ ಒಂದು ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದು. ದಂಡ ಅಥವಾ ಎರಡೂ ವಿಧಿಸಬಹುದು ಎಂದು ಅರಿತಿದ್ದೇನೆ ಎಂದು ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು.

ನ್ಯಾಯಾಲಯ ಅಥವಾ ಅಧಿಕೃತ ದಾಖಲೆಗಳಲ್ಲಿ ಸುಳ್ಳು ಸಾಕ್ಷ್ಯ ಅಥವಾ ಪ್ರಮಾಣಪತ್ರ ನೀಡುವುದು 2023ರ ಕಲಂ 227ರಂತೆ ಶಿಕ್ಷಾರ್ಹವಾಗಿದೆ. ಇದಕ್ಕೆ ಹೆಚ್ಚು ಕಠಿಣ ಶಿಕ್ಷೆಗಳನ್ನು ವಿಧಿಸಲಾಗುತ್ತದೆ.

ಇಷ್ಟೆಲ್ಲಾ ಕಾನೂನು ಸಮಸ್ಯೆ ಇರುವ ಕಾರಣ ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿ ದೂರು ಸಲ್ಲಿಕೆ ವೇಳೆ ಘೋಷಣಾ ಪತ್ರಕ್ಕೆ ಸಹಿ ಹಾಕ್ತಾರಾ? ಇಲ್ಲವಾ ಎನ್ನುವುದು ಕುತೂಹಲ ಮೂಡಿಸಿದೆ.

Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ

TAGGED:Vote theft allegations in Bengaluru: Why did Rahul return to Delhi without filing a complaint with the Election Commission?
Share This Article
Facebook Twitter Copy Link Print
Previous Article ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 09-08-2025,‌ ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?