newsics.com
ಬೆಂಗಳೂರು: ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ ನಿನ್ನೆ ತೆರವು ಮಾಡಲಾಗಿತ್ತು. . ಈ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಎಂದೂ ಮುಗಿಯದ ಅಭಿಮಾನ
ಈ ವಿಚಾರವಾಗಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ನಟ ಪೋಸ್ಟ್ ಮಾಡಿದ್ದು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್!