newsics.com
ವಿಷ್ಣುವರ್ಧನ್ ಸಮಾಧಿ ಧ್ವಂಸ ಪ್ರಕರಣದ ಬಳಿಕ ಸುದೀಪ್ ಅವರು ತಮ್ಮ ಬೇಸರವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ವಿಷ್ಣು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.
‘ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೊ ಅದು ನಡೆಯಬಾರದಿತ್ತು. ಇಲ್ಲಿ ಒಂದು ಚೆನ್ನಾಗಿ ಅರ್ಥವಾಗುತ್ತದೆ. ಒಂದೇ ಊರು, ಒಂದೇ ರಾಜ್ಯ, ನಮ್ಮದೇ ಕಲಾವಿದರು ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯ. ನಾವುಗಳು ಓಡಾಡಿದ್ದಾಯ್ತು, ನೀವುಗಳು ಹೋರಾಡಿದ್ದಾಯ್ತು, ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾಯ್ತು. ದಯವಿಟ್ಟು ಇದನ್ನು ಮಾಡಿಕೊಡಿ, ಸ್ವಲ್ಪ ಕರುಣೆ ತೋರಿಸಿ ಎಂದು ಕೇಳಿಕೊಂಡಿದ್ದಾಯ್ತು. ಅಧಿಕಾರದಲ್ಲಿರುವವರಿಗೆ ಇದು ದೊಡ್ಡ ವಿಷಯ ಆಗಿರಲಿಲ್ಲ. ಅವರ ಸಣ್ಣ ಪ್ರಯತ್ನ ಸಹ ಇಂದು ನಡೆದಿರುವುದನ್ನು ತಡೆಯುತ್ತಿತ್ತು’ ಎಂದು ಸುದೀಪ್ ಹೇಳಿದ್ದಾರೆ
‘ಇನ್ನು ಮುಂದೆ ನಾವು ಭಿಕ್ಷೆ ಬೇಡಬೇಕಾದ ಅವಶ್ಯಕತೆ ಇಲ್ಲ. ಮಾಡಬೇಕು ಎಂದುಕೊಂಡಿದ್ದರೆ ಇಷ್ಟು ಹೊತ್ತಿಗೆ ಮಾಡಿರುತ್ತಿದ್ದರು. ಆದರೆ ಈ ವರೆಗೆ ಮಾಡಿಲ್ಲ ಅಂದರೆ ಅರ್ಥ ಮಾಡಿಕೊಳ್ಳಿ. ಯಾರು? ಏನು? ಹೇಗೆ ಎತ್ತಿಟ್ಟರು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ. ಈಗ ಅದು ಮುಗಿದು ಹೋದ ಕತೆ. ಅದನ್ನು ಬದಿಗಿಟ್ಟು, ನಾವು ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಗಮನ ಹರಿಸೋಣ’ ಎಂದು ಸುದೀಪ್ ಹೇಳಿದ್ದಾರೆ.