ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?

newsics.com ರಾಯಚೂರು: ಕಲಿಯುಗದ ಕಾಮಧೇನು ಗುರುರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಗುರುರಾಯರ ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಶ್ರೀಕ್ಷೇತ್ರದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಗುರುರಾಯರ 354ನೇ ಆರಾಧನಾ ಮಹೋತ್ಸವದ ಎರಡನೇ ದಿನವಾದ ಇಂದು ಮಂತ್ರಾಲಯದ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಮೂಲ ವೃಂದಾವನಕ್ಕೆ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಿಸಲಾಗಿದೆ. ಈ ಏಳು ದಿನಗಳ ಸಪ್ತರಾತ್ರೋತ್ಸವ ನಡೆಯಲಿದೆ. ಇಂದು ಸಂಜೆ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ … Continue reading ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?