Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್ ಆರೋಪ, ಡಿಕೆಶಿಗೆ ಸಂಕಷ್ಟ… ದೂರಿನ ಪ್ರತಿಗೆ ಸಹಿ ಹಾಕಿ ಎಂದ ಚುನಾವಣಾ ಆಯೋಗ!
ದೇಶಕರ್ನಾಟಕ

ರಾಹುಲ್ ಆರೋಪ, ಡಿಕೆಶಿಗೆ ಸಂಕಷ್ಟ… ದೂರಿನ ಪ್ರತಿಗೆ ಸಹಿ ಹಾಕಿ ಎಂದ ಚುನಾವಣಾ ಆಯೋಗ!

Share
2 Min Read
SHARE

newsics.com

ಬೆಂಗಳೂರು:ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದರು.  ದೂರಿಗೆ ಪ್ರತಿಕ್ರಿಯಿಸಿರುವ ಚುನಾವಣಾಧಿಕಾರಿ ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ ದೂರನ್ನು ಬೆಂಬಲಿಸುವ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಡಿಕ್ಲರೇಷನ್​ಗೆ ಸಹಿ ಮಾಡುವಂತೆಯೂ ಅವರು ಸೂಚಿಸಿದ್ದಾರೆ

 

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವುದನ್ನು ವಿರೋಧಿಸಿ ಜಾಥಾ ನಡೆಸಿದ್ದರು..ಮೊದಲಿಗೆ ರಾಹುಲ್ ಗಾಂಧಿನೇ ನಿಯೋಗದಲ್ಲಿ ತೆರಳಿ ದೂರು ನೀಡಲು ಉದ್ದೇಶಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬದಲಾವಣೆ ಹಿನ್ನೆಲೆ ರಾಹುಲ್ ಗಾಂಧಿ ದೂರು ಕೊಡಲು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಲಿಲ್ಲ.

ಮುಖ್ಯ ಚುನಾವಣಾಧಿಕಾರಿ ನಿನ್ನೆ ರಾಹುಲ್​ ಗಾಂಧಿಗೆ ಪತ್ರ ಬರೆದು ಮತಗಳ್ಳತನದ ಬಗ್ಗೆ ಮಾಹಿತಿಯೊಂದಿಗೆ ಅಫಿಡವಿಟ್​ ನೀಡುವಂತೆ ಸೂಚಿಸಿತ್ತು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮತ ಕಳ್ಳತನ ಅಗುತ್ತಿರುವುದನ್ನು ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಅಕ್ರಮ ನಡೆದಿರುವುದನ್ನು ಕಾಂಗ್ರೆಸ್ ಪಕ್ಷದ ರೀಸರ್ಚ್​ ತಂಡ ವಿಸ್ತೃತವಾಗಿ ಪರಿಶೀಲನೆ ನಡೆಸಿದ ಬಳಿಕ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಪುರಾವೆಗಳನ್ನು ಅಯೋಗಕ್ಕೆ ಸಲ್ಲಿಸಿದ್ದೇವೆ. ಆದರೆ ಸಮಗ್ರ ವಿವರಣೆಯನ್ನು ಸಲ್ಲಿಸಿಲ್ಲ, ನಮ್ಮ ರೀಸರ್ಚ್​ ಇನ್ನೂ ಮುಗಿದಿಲ್ಲ, ಇನ್ನೂ ಮಾಹಿತಿ

ದೂರಿನ ಪ್ರತಿಯಲ್ಲೇನಿದೆ?

ಡಿಕೆ ಶಿವಕುಮಾರ್ ಅವರು ನೀಡಿದ ದೂರಿಗೆ ಮತ್ತು ಮಾಡಿದ ಆರೋಪಕ್ಕೆ ಸೂಕ್ತ ಸಾಕ್ಷಿ ನೀಡುವಂತೆ ಚುನಾವಣಾಧಿಕಾರಿ ಕೋರಿದ್ದಾರೆ. ಹಾಗೇ, ಡಿಕ್ಲರೇಷನ್​ ಗೆ ಸಹಿ ಹಾಕುವಂತೆ ಆದೇಶಿಸಿದ್ದಾರೆ. ಈ ಡಿಕ್ಲರೇಷನ್ ಅಥವಾ ಘೋಷಣಾ ಪತ್ರದಲ್ಲಿ ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆ ಶಿಕ್ಷಾರ್ಹವಾಗಿದೆ. 1950ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆ ಕಲಂ 31ರಂತೆ ಗರಿಷ್ಠ ಒಂದು ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದು. ದಂಡ ಅಥವಾ ಎರಡೂ ವಿಧಿಸಬಹುದು ಎಂದು ಅರಿತಿದ್ದೇನೆ ಎಂದು ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು.

 

https://www.newsics.com/2025/08/09/gang-rape-of-mentally-retarded-young-woman-video-made-and-circulated-by-miscreants/

TAGGED:#Rahul #accusations #DKSH #ElectionCommission #complaint #Congress
Share This Article
Facebook Twitter Copy Link Print
Previous Article ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್‌*ರೇಪ್‌ – ವಿಡಿಯೋ ಮಾಡಿ ಹರಿಬಿಟ್ಟ ದುರುಳರು
Next Article ದೆಹಲಿಯಲ್ಲಿ ಭಾರೀ‌ ಮಳೆ, ವಿಮಾನ ಸಂಚಾರದಲ್ಲಿ ವ್ಯತ್ಯಯ, ಜನಜೀವನ ಅಸ್ತವ್ಯಸ್ತ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?