newsics.com
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡಲು ಮತ್ತೆ ಚಿಂತನೆ ನಡೆದಿದೆ.
ಈ ನಿಟ್ಟಿನಲ್ಲಿ ಬೆವ್ಕೊ (BEVCO- Kerala State Beverages Corporation) ಮರು ಯತ್ನಕ್ಕೆ ಮುಂದಾಗಿದೆ.
ಈ ಸಂಬಂಧ ಬೆವ್ಕೊ ವ್ಯವಸ್ಥಾಪಕ ನಿರ್ದೇಶಕಿ ಹರ್ಷಿತಾ ಅಟ್ಟಲೂರಿ ಸರ್ಕಾರಕ್ಕೆ ವಿವರವಾದ ಶಿಫಾರಸ್ಸು ವರದಿಯನ್ನು ಸಲ್ಲಿಸಿದ್ದಾರೆ. ಆದಾಯ ಹೆಚ್ಚಿಸುವ ಉದ್ದೇಶದಿಂದ ಷರತ್ತುಗಳಿಗೆ ಒಳಪಟ್ಟು ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡಲು ಕಂಪನಿ ಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.
ಆನ್‌ಲೈನ್ ಮದ್ಯ ಮಾರಾಟಕ್ಕಾಗಿ ಬೆವ್ಕೊ ಈಗಾಗಲೇ ಮೊಬೈಲ್ ಅಪ್ಲಿಕೇಶನ್ ಸಹ ಸಿದ್ಧಪಡಿಸಿದೆ. ಸ್ವಿಗ್ಗಿ ಸೇರಿದಂತೆ ಆನ್‌ಲೈನ್ ವಿತರಣಾ ವೇದಿಕೆಗಳು ಆಸಕ್ತಿ ವ್ಯಕ್ತಪಡಿಸಿವೆ ಎಂದು ಬೆವ್ಕೊ ವ್ಯವಸ್ಥಾಪಕ ನಿರ್ದೇಶಕಿ ಹರ್ಷಿತಾ ಅಟ್ಟಲೂರಿ ಮಾಹಿತಿ ನೀಡಿದ್ದಾರೆ.
ಮೂರು ವರ್ಷಗಳ ಹಿಂದೆ, ಸರ್ಕಾರ ಆನ್‌ಲೈನ್ ಮದ್ಯ ಮಾರಾಟಕ್ಕೆ ಅನುಮತಿ ಕೋರಿತ್ತು. ಆದರೆ ಸರ್ಕಾರ ಅನುಮತಿ ನೀಡಿರಲಿಲ್ಲ. ಇದೀಗ ಮತ್ತೊಮ್ಮೆ ಬೆವ್ಕೊ ವ್ಯವಸ್ಥಾಪಕ ನಿರ್ದೇಶಕಿ ಹರ್ಷಿತಾ ಅಟ್ಟಲೂರಿ ಅವರು ಮೊಬೈಲ್ ಅಪ್ಲಿಕೇಶನ್ ಮೂಲಕ ಮದ್ಯ ಮಾರಾಟ ಮಾಡುವ ಕುರಿತು ಶಿಫಾರಸ್ಸು ವರದಿಯನ್ನು ಸಲ್ಲಿಸಿದ್ದಾರೆ.
PM MODI KSR ರೈಲ್ವೆ ನಿಲ್ದಾಣದಲ್ಲಿ 3 `ವಂದೇ ಭಾರತ್ ರೈಲು’ಗಳಿಗೆ ಪ್ರಧಾನಿ ಮೋದಿ ಚಾಲನೆ