newsics.com
ಶ್ರೀನಗರ: 1990ರಲ್ಲಿ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ.
ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ನೊಂದಿಗೆ ಈ ಹಿಂದೆ ಸಂಬಂಧ ಹೊಂದಿದ್ದ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿಕೊಂಡು ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
35 ವರ್ಷಗಳ ಹಿಂದೆ, 1990ರ ಏಪ್ರಿಲ್‌ನಲ್ಲಿ ಶ್ರೀನಗರದ SKIMS ಆಸ್ಪತ್ರೆಯಲ್ಲಿ ಕಾಶ್ಮೀರಿ ಪಂಡಿತ ಮಹಿಳೆ ಸರಳಾ ಭಟ್‌ರವರ ಅಪಹರಣ ಮತ್ತು ಭೀಕರ ಹತ್ಯೆ ನಡೆದಿತ್ತು. ಈ ಘಟನೆಯು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲಿನ ದಾಳಿಗಳ ಒಂದು ಭಾಗವಾಗಿತ್ತು. 35 ವರ್ಷಗಳ ನಂತರ, ಈ ಪ್ರಕರಣದ ತನಿಖೆಯನ್ನು SIA ಮರು ಆರಂಭಿಸಿದೆ