newsics.com
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ದೂರುದಾರ ತೋರಿದ್ದ ಮಹತ್ವದ ಸ್ಥಳ 13ನೇ ಪಾಯಿಂಟ್ ನಲ್ಲಿ ಉತ್ಖನನದ ಮೂಲಕ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಮೊದಲಿಗೆ ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದು, ಬಳಿಕ ಜೆಸಿಬಿ ಮೂಲಕ ಮಣ್ಣು ಅಗೆದು ಉತ್ಖನನ ನಡೆಸಲಾಗುತ್ತಿದೆ. ಈ ಜಾಗದಲ್ಲಿ ಸುಮಾರು 18 ಅಡಿಗಳಷ್ಟು ಆಳದವೆರೆಗೂ ಮಣ್ಣು ಅಗೆದು ಪರಿಶೀಲನೆ ನಡೆಸಲು ಎಸ್ ಐಟಿ ಮುಂದಾಗಿದೆ.
ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಥಳದ ಸುತ್ತ ಮಾತ್ರವಲ್ಲದೇ, ನೇತ್ರಾವತಿ ಅಜಿಕುರಿ ರಸ್ತೆಯ ಸುಮಾರು ನೂರು ಮೀಟರ್ ಗೂ ಅಧಿಕ ದೂರದ ವರೆಗೂ ರಸ್ತೆ ಬದಿಯಲ್ಲಿ ಜಿಪಿಆರ್ ಸ್ಕ್ಯಾನಿಂಗ್ ಕಾರ್ಯ ನಡೆಸಲಾಗಿದೆ.