newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಇದೀಗ ಕಿಲ್ಲರ್ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
https://www.newsics.com/2025/08/13/young-man-saves-woman-hanging-from-joint-wheel/