newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಜನರ ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ನಟ ದರ್ಶನ್ ತಮಿಳುನಾಡಿನಲ್ಲಿರುವ ವಿಚಾರ ಬೆಳಕಿಗೆ ಬಂದಿದೆ. ತಮಿಳುನಾಡಿನ ದೇವಾಲಯವೊಂದರ ದರ್ಶನಕ್ಕೆ ನಟ ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ 13ರಂದು ರಾತ್ರಿ ತಮ್ಮ ಮೈಸೂರಿನ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯಲ್ಲಿರುವ ಫಾರಂ ಹೌಸ್ ಗೆ ಬಂದಿದ್ದ ನಟ ದರ್ಶನ್ ಬಳಿಕ ರಾತ್ರೋ ರಾತ್ರಿ ತಮಿಳುನಾಡು ಕಡೆ ಪಯಣ ಬೆಳೆಸಿದ್ದಾರೆನ್ನಲಾಗಿದೆ.
ಸುಪ್ರೀಂ ಕೋರ್ಟ್ ತಕ್ಷಣವೇ ದರ್ಶನ್ ಮತ್ತು ಪವಿತ್ರಾ ಗೌಡನನ್ನು ಬಂಧಿಸಲು ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿರುವ ದರ್ಶನ್ ಜಾಗವನ್ನು ಪೊಲೀಸರು ಪತ್ತೆ ಮಾಡಿದ್ದಾರಂತೆ. ಹೀಗಾಗಿ ಸ್ಥಳೀಯ ಪೊಲೀಸರ ನೆರವು ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾಮೀನು ಸಿಗುವ ಸಮಯದಲ್ಲಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದ ಕಾರಣ ಮತ್ತೆ ಬಳ್ಳಾರಿ ಜೈಲಿಗೆ ಹೋಗಬೇಕಾಗಿದೆ.
ಪವಿತ್ರಾ ಗೌಡ ಕೂಡ ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ದೇಗುಲದಲ್ಲಿರುವಾಗಲೇ ಪವಿತ್ರಾಗೆ ಬೇಲ್ ರದ್ದಾದ ಸುದ್ದಿ ಬಂದಿದ್ದು, ಪೋನ್ ಮೂಲಕ ವಕೀಲರಿಂದ ಮಾಹಿತಿ ಪಡೆದುಕೊಂಡರು.
Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ