newsics.com
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಜೈಲಿನಲ್ಲಿ ರಾಜಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡುಬಂದರೆ, ಆರೋಪಿ ಜೈಲಿನ ಲಾನ್‌ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.
ಅಲ್ಲದೆ, ಕರ್ನಾಟಕ ಹೈಕೋರ್ಟ್ ಆದೇಶಗಳ ಲೋಪವನ್ನು ದರ್ಶನ್ ಜಾಮೀನು ವಿಚಾರದಲ್ಲಿ ಸುಪ್ರೀಂ ಎತ್ತಿ ತೋರಿಸಿದೆ.
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ