Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…
ಕರ್ನಾಟಕದೇಶಪ್ರಮುಖ

ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…

Share
2 Min Read
SHARE

newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ವಜಾಗೊಂಡ ಹಿನ್ನೆಲೆಯಲ್ಲಿ ಮತ್ತೆ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್ ಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯವರನ್ನು ಭೇಟಿಯಾಗುವ ಅವಕಾಶ ಇಲ್ಲ.

ಜೈಲಿನ ನಿಯಮದ ಪ್ರಕಾರ ರಜಾ ದಿನಗಳಲ್ಲಿ ಕೈದಿಗಳಿಗೆ ಮನೆಯವರನ್ನು ಭೇಟಿ ಮಾಡಲು ಅವಕಾಶ ನೀಡುವುದಿಲ್ಲ. ಸೋಮವಾರ ದರ್ಶನ್ ಮತ್ತು ಪವಿತ್ರಾ ಗೌಡಗೆ ಕುಟುಂಬದವರ ಭೇಟಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಪ್ರಸ್ತುತ, ದರ್ಶನ್ ಹಾಗೂ ಅವರ ತಂಡ ಕ್ವಾರಂಟೈನ್ ಜೈಲಿನಲ್ಲಿದ್ದು, ಪವಿತ್ರಾ ಗೌಡ ಮಾತ್ರ ಪ್ರಮುಖ ಜೈಲಿನ ಮಹಿಳಾ ಬ್ಯಾರಕ್‌ನಲ್ಲಿ ಸೆರೆವಾಸದಲ್ಲಿದ್ದಾರೆ.

79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜೈಲು ಅಧಿಕಾರಿಗಳು ಬಂಧಿಗಳಿಗೆ ಲಾಡು ವಿತರಣೆ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ ಆಗಸ್ಟ್ 15ರ ಬೆಳಗ್ಗೆ ಜೈಲಿನ ಮೆನುವಿನಂತೆ ನೀಡಲಾದ ಉಪ್ಪಿಟ್ಟನ್ನು ಸೇವಿಸಿದರು.

ಜೈಲು ಸಿಬ್ಬಂದಿ ಸಾಮಾನ್ಯ ವಿಚಾರಣಾಧೀನ ಕೈದಿಗಳಿಗೆ ನೀಡುವ ರೀತಿಯಲ್ಲಿ ಉಪ್ಪಿಟ್ಟು ಒದಗಿಸಿದ್ದರು. ದರ್ಶನ್ ಜತೆಗೆ ಆರೋಪಿಗಳಾದ ನಾಗರಾಜ್, ಪ್ರದೂಶ್ ಮತ್ತು ಲಕ್ಷ್ಮಣ್ ಕೂಡ ಉಪ್ಪಿಟ್ಟನ್ನು ಸೇವಿಸಿದರು.
ದರ್ಶನ್, ನಾಗರಾಜ್, ಲಕ್ಷ್ಮಣ್ ಮತ್ತು ಪ್ರದೂಶ್ ನಾಲ್ವರು ಪ್ರಸ್ತುತ ಜೈಲಿನ ಕ್ವಾರಂಟೈನ್ ಸೆಲ್‌ನ ಅಡ್ಮಿಷನ್ ಬ್ಯಾರಕ್‌ನಲ್ಲಿ ಇದ್ದಾರೆ. ಇಂದು ಬೆಳಗ್ಗೆ 10 ಗಂಟೆಯ ನಂತರ ಇವರಿಗೆ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಲಾಗಿದೆ.

ಈ ನಾಲ್ವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಬೇಕೋ ಅಥವಾ ಒಂದೇ ಬ್ಯಾರಕ್‌ನಲ್ಲಿ ಇರಿಸಬೇಕೋ ಎಂಬುದನ್ನು ಹಿರಿಯ ಜೈಲು ಅಧಿಕಾರಿಗಳು ಶೀಘ್ರದಲ್ಲೇ ನಿರ್ಧರಿಸಲಿದ್ದಾರೆ.
ಜೈಲಿಗೆ ಹೋದ ದರ್ಶನ್ ಮತ್ತು ಗ್ಯಾಂಗ್‌‌ಗೆ ಊಟಕ್ಕೆ ಚಪಾತಿ, ಅನ್ನ, ಸಾಂಬಾರ್ ನೀಡಲಾಯ್ತು. ರಾತ್ರಿ ಊಟ ಸೇವಿಸಿದ ದರ್ಶನ್, ಬಳಿಕ ಲಕ್ಷ್ಮಣ್ ಮತ್ತು ನಾಗರಾಜ್ ತಡ ರಾತ್ರಿವರೆಗೂ ಸಾಕಷ್ಟು ಮಾತುಕತೆ ನಡೆಸಿದರು. ತಡರಾತ್ರಿವರೆಗೂ ಮೂವರ ನಡುವೆ ಸಂಭಾಷಣೆ ಮುಂದುವರಿಯಿತು. ಆದರೆ, ಜೈಲಿನಲ್ಲಿ ನಿದ್ರೆ ಮಾಡದೇ ದರ್ಶನ್ ಗ್ಯಾಂಗ್ ಪರದಾಟ ನಡೆಸಿದೆ. ಜೈಲಿನಲ್ಲಿ ನಿದ್ರೆ ಬರದೆ ಬೆನ್ನುನೋವು ಎಂದು ದರ್ಶನ್ ಸಹಚರರ ಬಳಿ ಅಳಲು ವ್ಯಕ್ತಪಡಿಸಿದ್ದಾರಂತೆ. ಇದರ ಮಧ್ಯೆ, ಪ್ರದೂಶ್ ಮಾತ್ರ ಸಂಪೂರ್ಣ ಮೌನಕ್ಕೆ ಜಾರಿದ್ದು, ಯಾರೊಂದಿಗೂ ಮಾತನಾಡದೆ ಕಣ್ಣೀರು ಹಾಕುತ್ತಿದ್ದ. ಒಂದೇ ಬ್ಯಾರಕ್‌ನಲ್ಲಿದ್ದರೂ ದರ್ಶನ್, ನಾಗರಾಜ್, ಲಕ್ಷ್ಮಣ್ ಅವರ ಜತೆ ಮಾತಾಡಲಿಲ್ಲ. ತಡರಾತ್ರಿವರೆಗೂ ಎಚ್ಚರವಾಗಿಯೇ ಇದ್ದ.

ಮತ್ತೊಂದೆಡೆ, ಮಹಿಳಾ ಬ್ಯಾರಕ್‌ನಲ್ಲಿ ಪವಿತ್ರಾ ಗೌಡ ಮೌನಕ್ಕೆ ಶರಣಾಗಿದ್ದು, ಜೈಲಿಗೆ ಮರಳಿ ಕಾಲಿಟ್ಟಾಗಿನಿಂದಲೇ ಅವರು ಕಣ್ಣೀರು ಹಾಕುತ್ತಿದ್ದಾರೆ. ಯಾರೊಂದಿಗೂ ಮಾತನಾಡದ ಸ್ಥಿತಿಯಲ್ಲಿದ್ದಾರೆ. ರಾತ್ರಿ ಊಟ ಮಾಡದೆ, ಬೆಳಗಿನ ಜಾವದವರೆಗೂ ಚಡಪಡಿಸುತ್ತಿದ್ದು, ಬೆಳಗಿನ ಜಾವ ನಿದ್ರೆಗೆ ಜಾರಿದರು.
ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು, ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಅವರನ್ನು ಚಿತ್ರದುರ್ಗದಿಂದ ಕರೆತಂದು ಠಾಣೆಯಲ್ಲಿ ಇರಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿಯ ಜಾಮೀನುಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ನಿನ್ನೆ ದರ್ಶನ್, ಪವಿತ್ರಾ ಗೌಡ, ಪ್ರದೂಶ್, ಲಕ್ಷ್ಮಣ್ ಮತ್ತು ನಾಗರಾಜ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು. ಉಳಿದ ಇಬ್ಬರನ್ನು ಚಿತ್ರದುರ್ಗದಿಂದ ಕರೆತರಲು ವಿಳಂಬವಾದ ಕಾರಣ, ಅನುಕುಮಾರ್ ಮತ್ತು ಜಗದೀಶ್ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧರಾಗಿದ್ದಾರೆ.

ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಇವರನ್ನು ಕರೆತಂದು ಬಳಿಕ ಪರಪ್ಪನ ಅಗ್ರಹಾರದಲ್ಲಿ ಇರಿಸಲಿದ್ದಾರೆ.

mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

TAGGED:Actor Darshan's back hurts againPavithra struggles to sleep...Pradush spends the night crying
Share This Article
Facebook Twitter Copy Link Print
Previous Article mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ
Next Article Dosa robot ದೋಸೆ ಮಾಡಲು‌ ಬಂತು ರೋಬೋಟ್, ಇದು ಬೆಂಗಳೂರು ಇಂಜಿನಿಯರ್ ಆವಿಷ್ಕಾರ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?