newsics.com
ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು, ವಾಹನಗಳು, ಶಾಲೆಗಳು ಮತ್ತು ಆರೋಗ್ಯ ಕೇಂದ್ರಗಳು ಜಲಾವೃತಗೊಂಡಿವೆ.
ಕಳೆದ 48 ಗಂಟೆಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ಸೇರಿದಂತೆ ಹಲವೆಡೆ 321ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೀಕರ ಪ್ರವಾಹದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 307 ಜನರು ಸಾವನ್ನಪ್ಪಿದ್ದಾರೆ. ಮನೆಗಳು ಕುಸಿದು, ಪ್ರವಾಹದಲ್ಲಿ ಕೊಚ್ಚಿಹೋಗಿ ಸಾವು ಸಂಭವಿಸಿದೆ. ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದಿನ ಕೆಲವು ಗಂಟೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂನ್ ತಿಂಗಳ ಕೊನೆಯಿಂದ ಪಾಕಿಸ್ತಾನದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದೆ. ಮಳೆಯಿಂದಾಗಿ. ಇದರಿಂದ ದೇಶಾದ್ಯಂತ ಪ್ರವಾಹ ಉಂಟಾಗಿದೆ.
ಶಂಗ್ಲಾದಲ್ಲಿ 36, ಮನ್ಸೆಹ್ರಾದಲ್ಲಿ 23, ಸ್ವಾತ್‌ನಲ್ಲಿ 22, ಬಜೌರ್‌ನಲ್ಲಿ 21, ಬಟ್ಟಾಗ್ರಾಮ್‌ನಲ್ಲಿ 15 ಮತ್ತು ಅಬೋಟಾಬಾದ್‌ನಲ್ಲಿ ಒಂದು ಮಗು ಮುಳುಗಿ ಸಾವನ್ನಪ್ಪಿರುವ ಬಗ್ಗೆ ವರದಿ ಮಾಡಲಾಗಿದೆ.
Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ