ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!

newsics.com ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಮೊದಲು ಕೆಳಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ನಂತರ ಅದು ಮೇಲಿನ ಮಹಡಿಗೆ ಕೂಡ ಆವರಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರೂ ಓಡಿಹೋಗಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ. … Continue reading ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!