newsics.com
ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಶುಕ್ರವಾರ ರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ, ಮೃತ ರಾಮದಾಸ್ ಸೊರೇನ್ ಅವರಿಗೆ 62 ವರ್ಷ ವಯಸ್ಸಾಗಿತ್ತು. ಆಗಸ್ಟ್ 2 ರಂದು ತಮ್ಮ ನಿವಾಸದ ಸ್ನಾನಗೃಹದಲ್ಲಿ ಬಿದ್ದ ನಂತರ ಅವರನ್ನು ಜೆಮ್ಶೆಡ್ಪುರದಿಂದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಗೆ ವಿಮಾನದ ಮೂಲಕ ಸಾಗಿಸಲಾಯಿತು.
ಮೃತ ರಾಮದಾಸ್ ಸೊರೇನ್ ಅವರ ಪಾರ್ಥಿವ ಶರೀರವನ್ನು ಬೆಳಿಗ್ಗೆ 9.10 ಕ್ಕೆ ರಾಂಚಿಗೆ ತರಲಾಗಿದೆ. ಸದ್ಯ ವಿಧಾನಸಭಾ ಆವರಣದಲ್ಲಿ ಇರಿಸಲಾಗಿದ್ದು, ಅಲ್ಲಿ ಸಚಿವರು, ಶಾಸಕರು ಮತ್ತು ರಾಜಕೀಯ ಮುಖಂಡರು ಅವರಿಗೆ ಗೌರವ ಸಲ್ಲಿಸಲಿದ್ದಾರೆ